ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ 15,000 ರೂ. ನೀಡಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡಿದ್ದು ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡುವವರಿಗೆ ಆರ್ಥಿಕ ನೆರವು ನೀಡಲಾಗುವುದು.
ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆಸುವ ಕುಟುಂಬದವರು ಅಥವಾ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ, ಪಂಚಾಯಿತಿ ಮಟ್ಟದ ಅಧಿಕಾರಿಗಳಿಗೆ 15 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಲಾಗಿದೆ. ಇತ್ತೀಚಿಗೆ ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ನೆರವೇರಿಸಿದ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.