alex Certify BIG BREAKING: ಬೆಳ್ಳಂಬೆಳಗ್ಗೆ ಭಾರೀ ಅವಘಡ, ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವು – ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಭಾರೀ ಅವಘಡ, ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವು – ನಾಲ್ವರು ಗಂಭೀರ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಶಾಖಪಟ್ಟಣದಲ್ಲಿನ ಔಷಧ ಕಂಪನಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ವಿಶಾಖಪಟ್ಟಣದ ಪಾರವಾಡ ಜವಾಹರಲಾಲ್ ನೆಹರು ಫಾರ್ಮ ಸಿಟಿಯಲ್ಲಿರುವ ಸಾಯಿನಾಥ್ ಲೈಫ್ ಸೈನ್ಸ್ ಕಂಪನಿಯಲ್ಲಿ ಬೆಂಜ್ ಮಿಡಾಜೋಲ್ ಅನಿಲ ಸೋರಿಕೆಯಾಗಿ ದುರಂತ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 30 ಕ್ಕೂ ಅಧಿಕ ಮಂದಿ ಕೆಲಸ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ. ವಿಶಾಖಪಟ್ಟಣದ ಆರ್.ಕೆ. ಆಸ್ಪತ್ರೆಗೆ ನಾಲ್ವರನ್ನು ದಾಖಲಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...