alex Certify ಕಾಮದ ಮದದಲ್ಲಿ ಸೇತುವೆ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸುವಾಗಲೇ ಸಿಕ್ಕಿಬಿದ್ದವ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಸೇತುವೆ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸುವಾಗಲೇ ಸಿಕ್ಕಿಬಿದ್ದವ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ವಾಗ್ಲೆ ಎಸ್ಟೇಟ್ ಸಮೀಪ ಸೇತುವೆ ಮೇಲೆ ಆರೋಪಿ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಪ್ರತಿದಿನ ಬೀದಿನಾಯಿಗಳಿಗೆ ಅನ್ನ ಹಾಕುತ್ತಿದ್ದ ಕೆಲವು ಹುಡುಗರು ಇದನ್ನು ಗಮನಿಸಿ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಅದಿತಿ ನಾಯರ್ ಅವರಿಗೆ ಮಾಹಿತಿ ನೀಡಿದ್ದಾರೆ.

ಅದಿತಿ ನಾಯರ್ ಪೊಲೀಸರಿಗೆ ದೂರು ನೀಡಿದ್ದು ಅವರು ದೂರು ಸ್ವೀಕರಿಸಲು ನಿರಾಕರಿಸಿದಾಗ ಪೊಲೀಸ್ ಆಯುಕ್ತ ವಿವೇಕ್ ಫನಾಸಲ್ಕರ್ ಅವರಿಗೆ ಮಾಹಿತಿ ಬಳಿಕ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ವಾಗ್ಲೆ ಎಸ್ಟೇಟ್ ಸಮೀಪ ವಾಸವಾಗಿರುವ 48 ವರ್ಷದ ಆರೋಪಿ ಕಸಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ. ಈತ ನಿತ್ಯವೂ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದು, ಇದನ್ನು ಗಮನಿಸಿದ ಹುಡುಗರು ಮಾಹಿತಿ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...