ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರವನ್ನು ಪೊಲೀಸರು ನೆರವೇರಿಸಿದ ಬೆನ್ನಲ್ಲೇ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬಲರಾಂಪುರ್ ಜಿಲ್ಲೆಯಲ್ಲಿ ಬುಧವಾರ ಸಂಜೆ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಇಬ್ಬರು ಪುರುಷರು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಆಕೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಲಖ್ನೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಆಕೆ ಮೃತಪಟ್ಟಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಬಲರಾಮ್ ಪುರ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್, ಸಂತ್ರಸ್ತೆ ಕುಟುಂಬದವರಿಂದ ದೂರು ಪಡೆದು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.