ಉತ್ತರಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಧುರಾ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.
ಶಾಹಿ ಈದ್ಗಾ ಮಸೀದಿ ಜಾಗ ಕೃಷ್ಣ ಜನ್ಮಭೂಮಿ ಮಂದಿರಕ್ಕೆ ನೀಡಬೇಕೆಂದು ಭಗವಾನ್ ಶ್ರೀ ಕೃಷ್ಣ ವಿರಾಜಮಾನ್ ಸಮಿತಿಯಿಂದ ಮನವಿ ಮಾಡಲಾಗಿದೆ. ಮಂದಿರಕ್ಕೆ ಜಾಗ ನೀಡಬೇಕೆಂದು ಕೋರಲಾಗಿದ್ದ ಅರ್ಜಿಯನ್ನು ಸಿವಿಲ್ ನ್ಯಾಯಾಲಯ ವಜಾಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಿದ ಆದೇಶವನ್ನು ಪ್ರಶ್ನಿಸಿ ಮಥುರಾದ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.