ಗುವಾಹಟಿ: ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಇಲ್ಲದೇ ಊರಿಗೆ ಮರಳಿದ್ದ ವಲಸೆ ಕಾರ್ಮಿಕನೊಬ್ಬ ಖರ್ಚಿಗೆ ಕಾಸಿಲ್ಲದೆ ಹೆಣ್ಣುಮಗುವನ್ನು ಮಾರಾಟ ಮಾಡಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಕೊಕ್ರಝಾರ್ ಜಿಲ್ಲೆಯ ದಾಂತೋಲಾ ಮಂಡಾರಿಯಾದ ನಿವಾಸಿ ದೀಪಕ್ ಬ್ರಹ್ಮ ವಲಸೆ ಕಾರ್ಮಿಕನಾಗಿದ್ದು, ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದ. ಆತ ಸಂಬಂಧಿಕರ ಮೂಲಕ 15 ದಿನದ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದಾನೆ.
ಮಗುವನ್ನು ರಕ್ಷಿಸಿ ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. 15 ದಿನಗಳ ಹಿಂದೆ ಆತನ ಪತ್ನಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಮಗುವನ್ನು 45 ಸಾವಿರ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಆತನ ಪತ್ನಿ ಮತ್ತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.