ಆಂಧ್ರಪ್ರದೇಶ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಆಂಧ್ರ ಸಿಎಂ ಜಗನಮೋಹನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ನ್ಯಾಯಾಧೀಶರು ತೆಲುಗುದೇಶಂ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿರೋಧಪಕ್ಷದ ನಾಯಕ ಮತ್ತು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರೊಂದಿಗೆ ಬಹಳ ಆಪ್ತರಾಗಿದ್ದರು ಎಂದು ಆರೋಪಿಸಿದ್ದಾರೆ.
ಸುಪ್ರೀಂಕೋರ್ಟ್ ಹಿರಿಯ ನ್ಯಾಯಾಧೀಶರ ವಿರುದ್ಧ ಜಗನ್ ಮೋಹನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರದಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು ಪ್ರಜಾಪ್ರಭುತ್ವದಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಉರುಳಿಸಲು ಹೈಕೋರ್ಟ್ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆಂಧ್ರಪ್ರದೇಶದ ಹೈಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದರು. ಅದರಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಇತರೆ ನಾಲ್ವರು ನ್ಯಾಯಾಧೀಶರು ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ತೆಲುಗು ದೇಶಂ ನಾಯಕರ ಪರವಾಗಿ ತೀರ್ಪುಗಳನ್ನು ನೀಡಲಾಗಿದೆ ಎಂದು ಉದಾಹರಣೆ ಮತ್ತು ಸಾಬೀತುಪಡಿಸುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ.