ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿದೆ. ಭೂಮಿ ಪೂಜೆಯ ಕ್ಷಣಗಳು ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ಜನರಲ್ಲಿ ಉತ್ಸಾಹ ಮತ್ತು ಸಂತೋಷ ಹೆಚ್ಚುತ್ತಿದೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಲಿದ್ದಾರೆ. ಆದ್ದರಿಂದ ಭದ್ರತಾ ವ್ಯವಸ್ಥೆ ಹೆಚ್ಚಿದೆ.
ಅಯೋಧ್ಯೆ ನಗರವನ್ನು ಮೊಹರು ಮಾಡಲಾಗಿದೆ. ಹೊರಗಿನಿಂದ ನಗರಕ್ಕೆ ಯಾವುದೇ ವಾಹನ ಬರುವಂತಿಲ್ಲ. ಪ್ರಧಾನಿ ನರೇಂದ್ರ ಮೋದಿ ಇಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಿದ್ದಾರೆ. ಅಯೋಧ್ಯೆಯಲ್ಲಿ ನಿನ್ನೆಯಿಂದಲೇ ಭಜನೆ-ಕೀರ್ತನೆ ನಡೆಯುತ್ತಿದೆ. ಸಂತರಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರೂ ಈ ಖುಷಿಯಲ್ಲಿ ಪಾಲ್ಗೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಸುಮಾರು 170 ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭದ್ರತಾ ವ್ಯವಸ್ಥೆಗಾಗಿ ಪ್ರತಿ ಅತಿಥಿಗೆ ವಿಶೇಷ ಕೋಡ್ ನೀಡಲಾಗಿದೆ. ಈ ಕೋಡ್ ಆಧರಿಸಿ, ಅವರ ಪ್ರವೇಶಕ್ಕೆ ಅನುಮತಿ ನೀಡಲಾಗ್ತಿದೆ. ರಾಮ ಮಂದಿರ ನಿರ್ಮಾಣದ ಸುತ್ತಮುತ್ತಲ ಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.