alex Certify 28 ವರ್ಷಗಳ ಬಳಿಕ ರಾಮಜನ್ಮ ಭೂಮಿಯಲ್ಲಿ ಅದ್ದೂರಿ ದೀಪಾವಳಿ ಆಚರಣೆಗೆ ಭರದ ಸಿದ್ದತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

28 ವರ್ಷಗಳ ಬಳಿಕ ರಾಮಜನ್ಮ ಭೂಮಿಯಲ್ಲಿ ಅದ್ದೂರಿ ದೀಪಾವಳಿ ಆಚರಣೆಗೆ ಭರದ ಸಿದ್ದತೆ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿರುವ ಬೆನ್ನಲ್ಲೇ ಈ ಬಾರಿ ಪವಿತ್ರ ಸ್ಥಳದಲ್ಲಿ ದೀಪಾವಳಿ ಆಚರಣೆಗೂ ನಿರ್ಧರಿಸಲಾಗಿದೆ. 1992ರ ಬಳಿಕ ಇದೇ ಮೊದಲ ಬಾರಿಗೆ ರಾಮ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ರಂಗೇರಲಿದೆ.

ರಾಮ ಜನ್ಮ ಭೂಮಿ – ಬಾಬರಿ ಮಸೀದಿ ವಿವಾದ ಪ್ರಕರಣದ ತೀರ್ಪಿಗೂ ಮುನ್ನ ವಿವಾದಿತ ಸ್ಥಳದಲ್ಲಿ ಯಾವುದೇ ಆಚರಣೆಗೆ ಅವಕಾಶವಿರಲಿಲ್ಲ. ಇದೀಗ ಸುಪ್ರಿಂ ಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿರುವ ಹಿನ್ನೆಲೆ ಅಯೋಧ್ಯೆಯಲ್ಲಿ ಸಂಭ್ರಮದ ದೀಪಾವಳಿ ಜರುಗಲಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ದೀಪಾವಳಿ ಉತ್ಸವವನ್ನ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಹಬ್ಬದ ದಿನ ದೇವಾಲಯದ ಪ್ರಾಂಗಣದ ಸುತ್ತ ಲಕ್ಷಾಂತರ ದೀಪಗಳು ಉರಿಯಲಿವೆ. ಸರಯೂ ನದಿ ದಡದಲ್ಲೂ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ.

ಕಳೆದ ವರ್ಷ ಅಯೋಧ್ಯೆಯಲ್ಲಿ 5 ಲಕ್ಷ ದೀಪಗಳನ್ನ ಉರಿಸುವ ಮೂಲಕ ಗಿನ್ನೆಸ್​ ದಾಖಲೆ ಮಾಡಲಾಗಿತ್ತು. ಈ ಬಾರಿ ಇದಕ್ಕೂ ಹೆಚ್ಚಿನ ದೀಪಗಳನ್ನ ಬೆಳಗಿಸಲು ಯೋಗಿ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಮತ್ತೊಂದು ವಿಶ್ವದಾಖಲೆ ಸೃಷ್ಟಿಯಾಗಲಿದೆ ಅಂತಾ ಅನೇಕರು ಅಭಿಪ್ರಾಯ ಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...