ಬಿಬಿಸಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರಿಗೆ ವ್ಯಕ್ತಿಯೊಬ್ಬ ಅಸಭ್ಯ ಭಾಷೆ ಬಳಸಿ ನಿಂದಿಸಿದ್ದು, ಇದು ಈಗ ಭಾರತದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಬಿಬಿಸಿ ಈ ಕುರಿತು ಕ್ಷಮೆ ಯಾಚಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಲಂಡನ್ ನಲ್ಲಿ ನಡೆದ ‘ಬಿಗ್ ಡಿಬೇಟ್’ ಕಾರ್ಯಕ್ರಮದ ವೇಳೆ ಇಂತಹುದೊಂದು ಘಟನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಇಂಗ್ಲೆಂಡಿನಲ್ಲಿ ಸಿಖ್ ರ ವಿರುದ್ಧ ನಡೆಯುತ್ತಿರುವ ಜನಾಂಗೀಯ ದ್ವೇಷ ಕುರಿತು ಚರ್ಚೆ ನಡೆಯುತ್ತಿತ್ತು. ಈ ಚರ್ಚೆ ಒಮ್ಮಿಂದೊಮ್ಮೆಗೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದತ್ತ ತಿರುಗಿದೆ.
ಈ ಸಂದರ್ಭದಲ್ಲಿ ಸಿಮೋನ್ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೊಬ್ಬ, ಭಾರತ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಹೆಸರನ್ನು ಪ್ರಸ್ತಾಪಿಸಿ ಅಸಭ್ಯ ಭಾಷೆ ಬಳಸಿದ್ದಾನೆ. ಆಘಾತಕಾರಿ ಸಂಗತಿಯೆಂದರೆ ಬಿಬಿಸಿ ಈ ವೇಳೆ ಕರೆ ಕಟ್ ಮಾಡದೆ ಅದನ್ನು ಯಥಾವತ್ ಪ್ರಸಾರ ಮಾಡಿದೆ.