ಪ್ರಯಾಗ್ ರಾಜ್: ಉತ್ತರಪ್ರದೇಶದಲ್ಲಿ ನಡೆದ ಮತ್ತೊಂದು ಲೈಂಗಿಕ ದೌರ್ಜನ್ಯದ ಘಟನೆಯಲ್ಲಿ ಬ್ಯೂಟಿಷಿಯನ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಹುಟ್ಟುಹಬ್ಬದ ಪಾರ್ಟಿಗೆ 20 ವರ್ಷದ ಬ್ಯೂಟಿಷಿಯನ್ ಆಹ್ವಾನಿಸಿದ್ದು ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿದೆ. ಬೆನಿಗಂಜ್ ನಿವಾಸಿಯಾಗಿರುವ ಬ್ಯೂಟಿಷಿಯನ್ ಸುಲೇಮ್ ಸರೈನಲ್ಲಿರುವ ಸ್ನೇಹಿತರ ಮನೆಗೆ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಿದ್ದರಿಂದ ತೆರಳಿದ್ದಳು.
ಗೆಳೆಯರೆಲ್ಲ ಸೇರಿ ಆಕೆ ಮದ್ಯ ಸೇವಿಸುವಂತೆ ಮಾಡಿದ್ದಾರೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಧೂಮಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲವಾರು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಆದರೆ ಯಾರನ್ನೂ ಬಂಧಿಸಿಲ್ಲ ಎಂದು ಹೇಳಲಾಗಿದೆ.