alex Certify BIG NEWS: ಇನ್ಮುಂದೆ ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಲ್ಲಿ ಆಧಾರ್, ಮೊಬೈಲ್ ಸಂಖ್ಯೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ಮುಂದೆ ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಲ್ಲಿ ಆಧಾರ್, ಮೊಬೈಲ್ ಸಂಖ್ಯೆ ಕಡ್ಡಾಯ

ಚೆನ್ನೈ: ಹೇರ್ ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್, ಸಲೂನ್, ಸ್ಪಾಗಳಲ್ಲಿ ಗ್ರಾಹಕರು ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಲೂನ್ ಗಳಿಂದಲೂ ಅನೇಕರಿಗೆ ಸೋಂಕು ತಗುಲಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರ ಆಧಾರ್ ಮತ್ತು ಮೊಬೈಲ್ ಸಂಖ್ಯೆ ವಿಳಾಸ ಪಡೆದುಕೊಳ್ಳುವಂತೆ ಸಲೂನ್, ಬ್ಯೂಟಿ ಪಾರ್ಲರ್ ಮಾಲೀಕರಿಗೆ ಸೂಚನೆ ನೀಡಲಾಗಿದೆ.

ಸೋಮವಾರದಿಂದ ಅನ್ಲಾಕ್ ಆರಂಭವಾದ ನಂತರ ಚೆನ್ನೈ ಮಹಾನಗರ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಲೂನ್ ಶಾಪ್ ತೆರೆಯಲು ಅನುಮತಿ ನೀಡಲಾಗಿದೆ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಲಾಗಿದೆ.

ಸಲೂನ್ ಶಾಪ್ ಗಳಲ್ಲಿ ಗ್ರಾಹಕರಿಗೆ ಬಳಸುವ ಟವೆಲ್, ವಸ್ತು ಮೊದಲಾದವುಗಳನ್ನು ತೊಳೆಯುವ ಮೊದಲು ಮರುಬಳಕೆ ಮಾಡಬಾರದು. ಶೀತ, ಕೆಮ್ಮು, ಜ್ವರ ರೋಗ ಲಕ್ಷಣಗಳನ್ನು ಹೊಂದಿದ ಉದ್ಯೋಗಿಗಳಿಗೆ ಕೆಲಸಕ್ಕೆ ಅನುಮತಿ ನೀಡಬಾರದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...