alex Certify ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ

ಕೊಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಮತಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್(60) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದೆ.

ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ, ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ. ಸೋಮವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ದೇವೇಂದ್ರನಾಥ್ ಪತ್ತೆಯಾಗಿದ್ದರು. ತಮ್ಮ ಮನೆಯ ಸ್ವಲ್ಪ ದೂರದ ಅಂಗಡಿಯೊಂದರ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಕಂಡು ಬಂದಿದ್ದು ಡೆತ್ ನೋಟ್ ಪತ್ತೆಯಾಗಿದೆ ಎಂದು ಹೇಳಲಾಗಿತ್ತು.

ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದ್ದು ತನಿಖೆಗೆ ಒತ್ತಾಯಿಸಲಾಗಿದೆ. ಬಿಜೆಪಿ ವತಿಯಿಂದ ಬಂದ್ ಗೆ ಕರೆ ನೀಡಿದ್ದು ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೆ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ದೇವೇಂದ್ರನಾಥ್ ಮರಣೋತ್ತರ ಪರೀಕ್ಷೆಯಲ್ಲಿ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ. ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮಾಹಿತಿ ಗೊತ್ತಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...