ಪಶ್ಚಿಮ ಬಂಗಾಳದ ಚೋಪ್ರಾ ಪ್ರದೇಶದಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದನೆಯ ವಾತಾವರಣ ಸೃಷ್ಟಿ ಮಾಡತೊಡಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ದಿನಾಜ್ ಪುರ ಜಿಲ್ಲೆಯ ಸೋನಾರ್ ಪುರ ಪ್ರದೇಶದಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.
ಸೋನಾರ್ ಪುರ ಪ್ರದೇಶದಲ್ಲಿ ಮೃತದೇಹ ಕಂಡು ಬಂದಿದ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳೀಯರು ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಲು ಮುಂದಾಗುತ್ತಿದ್ದಂತೆ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಹಾನಿಗೊಳಿಸಲಾಗಿದೆ. ಅಲ್ಲದೆ ಹಲವು ಸಾರ್ವಜನಿಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಿಯಂತ್ರಣಕ್ಕೆ ಹರಸಾಹಸ ನಡೆಸಿದ್ದಾರೆ.