ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರು ಭಾರತ ಅಭಿವೃದ್ಧಿ ಪಥದಲ್ಲಿ ಅಳಿಸಲಾಗದ ಗುರುತು ಮೂಡಿಸಿದ್ದಾರೆ. ಅತ್ಯುನ್ನತ ರಾಜಕಾರಣಿಯಾಗಿದ್ದ ಅವರು ರಾಜಕೀಯ ಮತ್ತು ಸಮಾಜದ ಎಲ್ಲಾ ವರ್ಗದ ಮೆಚ್ಚಿನ ವ್ಯಕ್ತಿಯಾಗಿದ್ದರು ಎಂದು ಮೋದಿ ಬಣ್ಣಿಸಿದ್ದಾರೆ.
ಪ್ರಣಬ್ ಮುಖರ್ಜಿ ಅವರ ಜೊತೆಗಿರುವ ಫೋಟೋ ಪೋಸ್ಟ್ ಮಾಡಿ ಅವರ ವ್ಯಕ್ತಿತ್ವ ಸ್ಮರಿಸಿದ್ದಾರೆ. ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು, ನಾಯಕರು ಸಂತಾಪ ಸೂಚಿಸಿದ್ದಾರೆ.