
ಖ್ಯಾತ ಗಾಯಕ, ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5 ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು.
ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ಇಹಲೋಕ ತ್ಯಜಿಸಿದ್ದಾರೆ.