ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ರಂದು ಪೂರ್ಣಗೊಳ್ಳಲಿದೆ.
ಹೀಗಾಗಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ.
ಇದೀಗ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಜಾರ್ಖಂಡ್ ಮಾಜಿ ರಾಜ್ಯಪಾಲೆ ಶೀಮತಿ ದ್ರೌಪದಿ ಮರ್ಮೂ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.