ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಶಾಲಾ – ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ನಿರ್ಬಂಧಗಳೊಂದಿಗೆ ಅಕ್ಟೋಬರ್ 15ರಿಂದಲೇ ಇವುಗಳ ಆರಂಭಕ್ಕೆ ಅನುಮತಿ ನೀಡಲಾಗಿದ್ದು, ಅಂತಿಮ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳೇ ಕೈಗೊಳ್ಳಬೇಕಾಗುತ್ತದೆ.
ಕಳೆದ ರಾತ್ರಿ ಬಿಡುಗಡೆ ಮಾಡಲಾದ ಅನ್ಲಾಕ್ ಮಾರ್ಗಸೂಚಿಯಲ್ಲಿ ಶಾಲಾ – ಕಾಲೇಜುಗಳ ಆರಂಭದ ಜೊತೆಗೆ ಶೇಕಡಾ 50ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರಗಳನ್ನೂ ಸಹ ಆರಂಭಿಸಲು ಅನುಮತಿ ನೀಡಲಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳು ತೆರೆಯಲಿವೆ.
ಕರ್ನಾಟಕದಲ್ಲಿ ಶಾಲಾ – ಕಾಲೇಜುಗಳನ್ನು ಆರಂಭಿಸಲು ಅಷ್ಟೇನೂ ಆತುರವಿಲ್ಲ ಎಂದು ಈ ಹಿಂದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ಅಕ್ಟೋಬರ್ 15ರಿಂದ ಶಾಲಾ – ಕಾಲೇಜು ಆರಂಭಕ್ಕೆ ಅನುಮತಿ ನೀಡಿರುವುದರಿಂದ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.