ಹೈದರಾಬಾದ್: ದೇಶಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಹಲವು ರಾಜ್ಯಗಳಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಒಂದೇ ಕಾಲೇಜಿನ 149 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ರಾಜಮಂಡ್ರಿಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿನ ಕಾತೇರು ತಿರುಮಲ ಕಾಲೇಜಿನ 149 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಿಚಿತ್ರವೆಂದರೆ ಕೋವಿಡ್ ಪಾಸಿಟಿವ್ ಬಂದಿರುವ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನ ಒಂದೇ ಹಾಸ್ಟೆಲ್ ನಲ್ಲಿ ವಾಸವಾದವರಾಗಿದ್ದಾರೆ.
ನಗೆಪಾಟಲಿಗೀಡಾಗಿದೆ ಪಾಕ್ ವಿಶ್ವವಿದ್ಯಾಲಯದ ಎಡವಟ್ಟು
ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 149 ವಿದ್ಯಾರ್ಥಿಗಳನ್ನು ಅದೇ ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾತೇರು ತಿರುಮಲ ಕಾಲೇಜಿನ ಹಾಸ್ಟೆಲ್ ಎದುರು ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.