ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,86,452 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3498 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,04,832 ಕ್ಕೆ ಏರಿಕೆಯಾಗಿದೆ.
ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ
ಇನ್ನು ದೇಶದಲ್ಲಿ 31,70,228 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,53,84,418 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,97,540 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 15,22,45,179 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.