alex Certify BIG NEWS: ಒಂದೇ ದಿನದಲ್ಲಿ 1 ಲಕ್ಷ 45 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ – ದೇಶದಲ್ಲಿವೆ ಒಟ್ಟು10,46,631 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1 ಲಕ್ಷ 45 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ – ದೇಶದಲ್ಲಿವೆ ಒಟ್ಟು10,46,631 ಸಕ್ರಿಯ ಪ್ರಕರಣ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,45,384 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 794 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 10,46,631 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,19,90,859 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 77,567 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 9,80,75,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...