alex Certify BIG NEWS: ಒಂದೇ ದಿನದಲ್ಲಿ 13,823 ಜನರಲ್ಲಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರೆಷ್ಟು ಗೊತ್ತೇ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 13,823 ಜನರಲ್ಲಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರೆಷ್ಟು ಗೊತ್ತೇ?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,823 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,95,660ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 162 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,718ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,97,201 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,02,45,741 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 16,988 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...