ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,264 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,91,651ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 90 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,302ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,45,634 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,89,715 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,667 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಈವರೆಗೆ 1,10,85,173 ಜನರಿಗೆ ಲಸಿಕೆ ಹಾಕಲಾಗಿದೆ.