alex Certify BIG NEWS: ಒಂದೇ ದಿನದಲ್ಲಿ 1,61,736 ಜನರಿಗೆ ಕೋವಿಡ್ ಪಾಸಿಟಿವ್; 879 ಜನರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1,61,736 ಜನರಿಗೆ ಕೋವಿಡ್ ಪಾಸಿಟಿವ್; 879 ಜನರು ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,61,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 879 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,71,058 ಕ್ಕೆ ಏರಿಕೆಯಾಗಿದೆ.

ಕೋವಿಡ್ ಲಸಿಕೆ ಪಡೆಯುವವರಿಗೆ ಮತ್ತೊಂದು ಸಿಹಿ ಸುದ್ದಿ: ಗ್ರಾಹಕರಿಗೆ ಹೊಸ ಯೋಜನೆ ಘೋಷಿಸಿದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಇನ್ನು ದೇಶದಲ್ಲಿ 12,64,698 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,22,53,697 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 97,168 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 14,00,122 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 25,92,07,108 ಜನರಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 10,85,33,085 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...