alex Certify BIG NEWS: ಒಂದೇ ದಿನದಲ್ಲಿ 1,86,364 ಜನರಲ್ಲಿ ಕೊರೊನಾ ಪಾಸಿಟಿವ್; 3,660 ಜನರು ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1,86,364 ಜನರಲ್ಲಿ ಕೊರೊನಾ ಪಾಸಿಟಿವ್; 3,660 ಜನರು ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…..?

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,86,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,660 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,18,895ಕ್ಕೆ ಏರಿಕೆಯಾಗಿದೆ.

ಮನಕಲಕುವ ಘಟನೆ ಕಂಡು ಕಣ್ಣೀರಿಟ್ಟ ಜನ: ಅಮ್ಮನ ಮೃತದೇಹದ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ಇನ್ನು ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,48,93,410 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,59,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ನಿನ್ನೆಯೊಂದೇ ದಿನ 20,70,508 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 33,90,39,861 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 20,57,20,660 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...