alex Certify BIG NEWS: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ – 22,274 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 22 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ – 22,274 ಮಂದಿ ಡಿಸ್ಚಾರ್ಜ್

ನವದೆಹಲಿ: ಕಳೆದ 24 ಗಂಟೆಯಲ್ಲಿ 22,272 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 251 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,343ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,81,667 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 97,40,108 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 22,274 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 8,53,527 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 16,71,59,289 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...