alex Certify BIG NEWS: ಒಂದೇ ದಿನದಲ್ಲಿ 24 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ – 312 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 24 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ – 312 ಜನ ಬಲಿ

ನವದೆಹಲಿ: ಕಳೆದ 24 ಗಂಟೆಯಲ್ಲಿ 24,712 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,23,778ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 312 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,756ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,83,849 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 96,93,173 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 29,791 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...