ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 40,715 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,16,86,796ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 199 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,60,166ಕ್ಕೆ ಏರಿಕೆಯಾಗಿದೆ.
ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ನೇಮಕಾತಿಗೆ ಅರ್ಜಿ
ಇನ್ನು ದೇಶದಲ್ಲಿ 3,45,377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,11,81,253 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 29,785 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 4,84,94,594 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.