alex Certify BIG NEWS: ಒಂದೇ ದಿನದಲ್ಲಿ 4,03,738 ಜನರಲ್ಲಿ ಕೊರೊನಾ ಸೋಂಕು ದೃಢ; 4,000ಕ್ಕೂ ಹೆಚ್ಚು ಜನರು ಬಲಿ; ಇಲ್ಲಿದೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 4,03,738 ಜನರಲ್ಲಿ ಕೊರೊನಾ ಸೋಂಕು ದೃಢ; 4,000ಕ್ಕೂ ಹೆಚ್ಚು ಜನರು ಬಲಿ; ಇಲ್ಲಿದೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,03,738 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,092 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,42,362ಕ್ಕೆ ಏರಿಕೆಯಾಗಿದೆ.

ಬಯಲಾಯ್ತು ಕೊರೋನಾ ಪರಿಸ್ಥಿತಿ ಕೈಮೀರಲು ಕಾರಣವಾದ ರಹಸ್ಯ: ಮೋದಿ ಸರ್ಕಾರದ ವೈಫಲ್ಯವೇ ಕಾರಣವೆಂದ ‘ದಿ ಲ್ಯಾನ್ಸೆಟ್’

ಇನ್ನು ದೇಶದಲ್ಲಿ 37,36,648 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,83,17,404 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,86,444 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 16,94,39,663 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...