alex Certify BIG NEWS: ಒಂದೇ ದಿನ 3.32 ಲಕ್ಷ ಗಡಿ ದಾಟಿದ ಕೊರೊನಾ ಪಾಸಿಟಿವ್ ಕೇಸ್; ಭಾರತದಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ 3.32 ಲಕ್ಷ ಗಡಿ ದಾಟಿದ ಕೊರೊನಾ ಪಾಸಿಟಿವ್ ಕೇಸ್; ಭಾರತದಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಸ್ಫೋಟಗೊಳ್ಳುತ್ತಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,32,730 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ‌ ಒಟ್ಟು ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2,263 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,86,920ಕ್ಕೆ ಏರಿಕೆಯಾಗಿದೆ.

ಆಪ್ತ ಸಹಾಯಕನ ಕುಟುಂಬಕ್ಕೆ ಸಚಿವ ಶ್ರೀರಾಮುಲು ವಿಶೇಷ ಕೊಡುಗೆ

ಇನ್ನು ದೇಶದಲ್ಲಿ 24,28,616 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,36,48,159 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,93,279 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 13,54,78,420 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...