alex Certify BIG NEWS: ಒಂದೇ ದಿನ 3,82,315 ಜನರಿಗೆ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ 3,82,315 ಜನರಿಗೆ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,315 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,780 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ.

ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್: 2 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಇನ್ನು ದೇಶದಲ್ಲಿ 34,87,229ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,69,51,731 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,38,439 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 15,41,299 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದ್ದು, ದೇಶದಲ್ಲಿ ಈವರೆಗೆ 29,48,52,078 ಜನರಿಗೆ ಕೊವಿಡ್ ಸ್ಯಾಂಪಲ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 16,04,94,188 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...