ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 7,992 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 393 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475128 ಕ್ಕೆ ಏರಿಕೆಯಾಗಿದೆ.
ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮುಂಬಡ್ತಿಗೆ ಹೆಚ್ಚಿನ ಅವಕಾಶ
ಇನ್ನು ದೇಶದಲ್ಲಿ 93277 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9265 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34105066 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,50,672 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 76,36,569 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,31,99,92,482 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.