ಕೊರೊನಾದಿಂದ ಕಳೆದ ಎಂಟು ತಿಂಗಳಿಗೂ ಅಧಿಕ ಕಾಲ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಈಗ ಆರಂಭವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.
ಇದರ ಮಧ್ಯೆ ಕೇರಳದಿಂದ ಆಗಮಿಸಿದ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳದಿಂದ ಆಗಮಿಸುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡುವಂತೆ ತಾಂತ್ರಿಕ ಸಲಹಾ ಮಂಡಳಿ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗಿದೆ.
5 ಕೆ.ಜಿ. ಬಾದಾಮಿಗಾಗಿ ಘಾಜಿಪುರದವರೆಗೆ ಓಡಿದ ಯುವಕ…!
ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚಿನ ಕೊರೊನಾ ಪ್ರಕರಣಗಳು ಕಂಡುಬಂದರೆ ಅಂತಹ ಸಂಸ್ಥೆಯನ್ನು ನಿಯಂತ್ರಣ ವಲಯವೆಂದು ಘೋಷಿಸಲು ಸ್ಥಳೀಯ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಅಲ್ಲದೆ ಕಣ್ಗಾವಲು ಇರಿಸುವುದರ ಜೊತೆಗೆ ಏಳು ದಿನಗಳ ನಂತರ ಆ ವಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಆರ್ ಟಿ – ಪಿಸಿಆರ್ ಪರೀಕ್ಷೆ ನಡೆಸಲು ತಿಳಿಸಲಾಗಿದೆ.