ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 40,953 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,15,55,284ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 188 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,59,558 ಕ್ಕೆ ಏರಿಕೆಯಾಗಿದೆ.
ಮಕ್ಕಳಿಗೆ ʼಕೊರೊನಾʼ ಹರಡುವ ಸಾಧ್ಯತೆ ಕುರಿತು ಕೇಂದ್ರ ಸಚಿವರಿಂದ ಮಹತ್ವದ ಮಾಹಿತಿ
ಇನ್ನು ದೇಶದಲ್ಲಿ 2,88,394 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,11,07,332 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 23,653 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆಯೊಂದೇ ದಿನ 10,60,971 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 23,24,31,517 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೆ 4,20,63,392 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.