ನವದೆಹಲಿ; ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ನಲುಗಿಹೋದ ಕುಟುಂಬಗಳಿಗೆ ಲೆಕ್ಕವಿಲ್ಲ. ಕರುಣೆಯಿಲ್ಲದ ಮಹಾಮಾರಿ ಆರ್ಭಟಕ್ಕೆ ನೂರಾರು ಮಕ್ಕಳು ಅನಾಥವಾಗಿವೆ. ಕೋವಿಡ್ ಎರಡನೇ ಅಲೆಯಲ್ಲಿ ದೇಶದಲ್ಲಿ 577 ಮಕ್ಕಳು ಅನಾಥವಾಗಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಸಂತ್ರಸ್ತರಿಗೆ ನೆರವಾಗಲು ಟೆಲಿ-ಕ್ಲಿನಿಕ್‌ಗೆ ಚಾಲನೆ ಕೊಟ್ಟ ವಿದ್ಯಾರ್ಥಿ ಸಂಘಟನೆ
ದೇಶದಲ್ಲಿ ಏಪ್ರಿಲ್ 1ರಿಂದ ಈವರೆಗೆ ಸುಮಾರು 577 ಮಕ್ಕಳು ತಂದೆ-ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ. ಈ ಮಕ್ಕಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಅನಾಥ ಮಕ್ಕಳ ಪಾಲನೆ-ಪೋಷಣೆಗಾಗಿ ಪ್ರತಿ ಜಿಲ್ಲೆಗೆ 10 ಲಕ್ಷ ರೂಪಾಯಿ ಮೀಸಲಿಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ನಟಿ ಮನೆಗೆ ನುಗ್ಗಿದ ಅಪರಿಚಿತ ಯುವಕ ಅರೆಸ್ಟ್
ಈ ಮಕ್ಕಳಿಗೆ ಕೌನ್ಸಲಿಂಗ್ ಅಗತ್ಯವಿದ್ದರೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಚಿಕಿತ್ಸೆ ನೀಡಲು ಸಿದ್ಧವಿದೆ. ಕೇಂದ್ರ ಸರ್ಕಾರ ರಾಜ್ಯ ಹಾಗೂ ಜಿಲ್ಲೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಿದೆ ಎಂದು ಹೇಳಿದ್ದಾರೆ.