ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮಹಾಸ್ಫೋಟವಾಗಿದೆ. ವಿಶ್ವದಲ್ಲೇ ಅತಿಹೆಚ್ಚು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,14,835 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 2,104 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,84,657ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 22,91,428 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,34,54,880 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,78,841 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 16,51,711 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಏಪ್ರಿಲ್ 21ರವರೆಗೆ 27,27,05,103 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 13,23,30,644 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.