ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಚಳಿಗಾಲದ ಬೆನ್ನಲ್ಲೇ ಮಹಾಮಾರಿಯ ಎರಡನೇ ಅಲೆ ಭೀತಿ ಎದುರಾಗಿದೆ. ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಾದ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಾಳೆ ಪ್ರಧಾನಿ ಮೋದಿ ಎರಡು ಹಂತಗಳಲ್ಲಿ ಸಭೆ ನಡೆಸಲಿದ್ದಾರೆ.
ಮೊದಲ ಹಂತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದು, ಎರಡನೇ ಹಂತದಲ್ಲಿ ಕೋವಿಡ್ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಲಿದ್ದಾರೆ.