alex Certify BIG NEWS: ಕೋವಿಡ್ ಅಟ್ಟಹಾಸಕ್ಕೆ ಭಾರತ ತತ್ತರ; ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 327 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಅಟ್ಟಹಾಸಕ್ಕೆ ಭಾರತ ತತ್ತರ; ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 327 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,59,632 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 327 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483790 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 590611 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40863 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34453603 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,63,566 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 89,28,316 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,51,57,60,645 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...