ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,711 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 100 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,756ಕ್ಕೆ ಏರಿಕೆಯಾಗಿದೆ.
ಬಾಲಕನನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದ ಯುವತಿ ಗರ್ಭಿಣಿ
ಇನ್ನು ದೇಶದಲ್ಲಿ 1,84,523 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,08,68,520 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,392 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಈವರೆಗೆ 2,09,22,344 ಜನರಿಗೆ ಲಸಿಕೆ ಹಾಕಲಾಗಿದೆ.