alex Certify BIG NEWS: ಕೋವ್ಯಾಕ್ಸಿನ್ ಲಸಿಕೆ ಬಳಿಕ ಕೊರೊನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವ್ಯಾಕ್ಸಿನ್ ಲಸಿಕೆ ಬಳಿಕ ಕೊರೊನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವರ ಸ್ಥಿತಿ ಗಂಭೀರ

ಗುರುಗ್ರಾಮ: ಕೊರೊನಾ ಸೋಂಕಿಗೆ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದ ಹರ್ಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸ್ವಯಂಪ್ರೇರಿತರಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ಸಚಿವ ಅನಿಲ್ ವಿಜ್ ಅವರಿಗೆ ಬಳಿಕ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರನ್ನು ರೋಹ್ಟಕ್ ನ ಪಿಜಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದ್ದು, ರೋಹ್ಟಕ್ ನಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಚಿವರು ಕೋವಿಡ್ ನ್ಯೂಮೋನಿಯಾದಿಂದ ಬಳಲುತ್ತಿದ್ದು, ಇದೀಗ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಗುರುಗ್ರಾಮಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...