alex Certify BIG NEWS: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಕೊರೊನಾ – ಒಂದೇ ದಿನ 40 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಕೊರೊನಾ – ಒಂದೇ ದಿನ 40 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 43,846 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,15,99,130ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 197 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,59,755 ಕ್ಕೆ ಏರಿಕೆಯಾಗಿದೆ.

ವ್ಯಾಕ್ಸಿನ್ ಪಡೆದ 48 ಗಂಟೆಗಳಲ್ಲೇ ಕೋವಿಡ್ ಪಾಸಿಟಿವ್; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ದೃಢ

ಇನ್ನು ದೇಶದಲ್ಲಿ 3,09,087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,11,30,288 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 22,956 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 4,46,03,841 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...