alex Certify BIG NEWS: ದೇಶದಲ್ಲಿದೆ ಇನ್ನೂ 1,48,609 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ ಇನ್ನೂ 1,48,609 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,831 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,38,194ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 84 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,080 ಕ್ಕೆ ಏರಿಕೆಯಾಗಿದೆ.

ಶಿವನ ಅನುಗ್ರಹದಿಂದ ದಿನಭವಿಷ್ಯ ಹಾಗೂ ರಾಶಿ ಫಲ

ಇನ್ನು ದೇಶದಲ್ಲಿ 1,48,609 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,05,34,505 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,904 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 5,32,236 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 20,19,00,614 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 57,75,322 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...