ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 46,232 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 90,50,598ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 564 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,32,726ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,39,747 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 84,78,124 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 49,715 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ನಿನ್ನೆಯೊಂದೇ ದಿನದಲ್ಲಿ 10,66,022 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 13,06,57,808 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.