ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಅದರಲ್ಲೂ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಹೀಗಾಗಿಯೇ ಲಾಕ್ ಡೌನ್, ನೈಟ್ ಕರ್ಫ್ಯೂ ನಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೀಮಿತ ಪ್ರದೇಶಗಳಲ್ಲಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಒಂದೊಮ್ಮೆ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ತೀವ್ರ ಹೆಚ್ಚಳವಾದರೆ ದೇಶದಲ್ಲಿ ಮತ್ತೊಮ್ಮೆ ಲಾಕ್ಡೌನ್ ಜಾರಿಯಾಗಲಿದೆಯಾ ಎಂಬ ಭೀತಿ ಎದುರಾಗಿದೆ.
ಇದರ ಮಧ್ಯೆ ತೀವ್ರ ಸ್ವರೂಪದ ಕೊರೊನಾ ಗುಣ ಲಕ್ಷಣಗಳನ್ನು ಹೊಂದಿರುವವರಿಗೆ ‘ಸಂಜೀವಿನಿ’ ಎಂದೇ ಹೇಳಲಾಗುತ್ತಿರುವ ಏಕಾಏಕಿ ರೆಮ್ ಡಿಸಿವರ್ ಚುಚ್ಚುಮದ್ದಿನ ಕೊರತೆ ಎದುರಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ದೊಡ್ಡ ದೊಡ್ಡ ಆಸ್ಪತ್ರೆಗಳು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿರುವುದು ಹಾಗೂ ರೆಮ್ ಡಿಸಿವರ್ ಚುಚ್ಚುಮದ್ದಿನ ಕೃತಕ ಅಭಾವವನ್ನು ಸೃಷ್ಟಿಸಿ ಕೆಲವರು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಕಾರಣ ಈ ಚುಚ್ಚುಮದ್ದಿನ ಕೊರತೆ ಕಂಡುಬಂದಿದೆ ಎಂದು ಹೇಳಲಾಗಿತ್ತು.
ಪ್ರಧಾನಿ ಮೋದಿಗೆ ಮುಸ್ಲಿಂ ಯುವಕ ಹೇಳಿದ್ದೇನು….? ಬಹಿರಂಗವಾಯ್ತು ಪಿಸುಮಾತಿನ ಹಿಂದಿನ ಗುಟ್ಟು
ಇದೀಗ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಕೊರೊನಾ ಚಿಕಿತ್ಸೆಯಲ್ಲಿ ಬಳಸುವ ರೆಮ್ ಡಿಸಿವರ್ ಚುಚ್ಚುಮದ್ದಿನ ರಫ್ತಿನ ಮೇಲೆ ನಿಷೇಧ ಹೇರಲಾಗಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಕಾರಣ ಮುಂದಿನ ದಿನಗಳಲ್ಲಿ ರೆಮ್ ಡಿಸಿವರ್ ಚುಚ್ಚುಮದ್ದಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಅಲ್ಲದೆ ಈ ಚುಚ್ಚುಮದ್ದು ಉತ್ಪಾದಿಸುವ ಸಂಸ್ಥೆಗಳು, ಎಷ್ಟು ದಾಸ್ತಾನು ತಮ್ಮಲ್ಲಿ ಲಭ್ಯವಿದೆ. ಅಧಿಕೃತ ವಿತರಕರು ಯಾರು ಮತ್ತು ದಾಸ್ತಾನುದಾರರು ಯಾರು ಎಂಬ ಮಾಹಿತಿಯನ್ನು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸೂಚಿಸಿದೆ.