alex Certify BIG NEWS: ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಮಹಾಮಾರಿಗೆ ಬಲಿಯಾದವರು ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಮಹಾಮಾರಿಗೆ ಬಲಿಯಾದವರು ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 44,489 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 92,66,706ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 524 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,35,223 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,52,344 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 86,79,138 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 36,367 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...