ಕೊಚ್ಚಿ: ಕೇರಳದಲ್ಲಿ ರಾಜ್ಯ ಲೋಕಸೇವಾ ಆಯೋಗ (ಪಿ ಎಸ್ ಸಿ) ನೇಮಕಾತಿ ವಿವಾವ ತಾರಕಕ್ಕೇರಿದ್ದು, ರ್ಯಾಂಕ್ ಹೋಲ್ಡರ್ಸ್ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಅಭ್ಯರ್ಥಿಗಳ ಸಮಸ್ಯೆ ಬಗೆಹರಿಸಲು ಆಸಕ್ತಿಯನ್ನೇ ಹೊಂದಿಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿಗಳ ಪ್ರತಿಭಟನೆ ಇಂದು 23ನೇ ದಿನಕ್ಕೆ ಕಾಲಿಟ್ಟಿದೆ. ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕೆ ಎಸ್ ಆರ್ ಟಿ ಸಿ ಮೆಕಾನಿಕ್ ಪಿ ಎಸ್ ಸಿ ಶ್ರೇಣಿಯ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದ ಅಭ್ಯರ್ಥಿಗಳೂ ಭಾಗಿಯಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಕಿಡಿಕಾರಿರುವ ಸಿಎಂ ಪಿಣರಾಯಿ ವಿಜಯನ್, ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಾಯೋಜಿತ ಪ್ರತಿಭಟನೆ. ವಿಪಕ್ಷಗಳು ಉದ್ಯೋಕಾಂಕ್ಷಿಗಳ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.