ನವದೆಹಲಿ: ದೇಶದ್ರೋಹ ಪ್ರಕರಣಕ್ಕೆಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನವರಿ 25ರವರೆಗೂ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್ ಬಾಂದ್ರಾ ಪೊಲೀಸರಿಗೆ ಸೂಚನೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಕೋಮು ದ್ವೇಷ ಮೂಡಿಸುವಂತಹ ಹೇಳಿಕೆಗಳನ್ನು ಅಪ್ ಲೋಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ಅಕ್ಟೋಬರ್ ನಲ್ಲಿ ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ನಟಿ ಕಂಗನಾ ರಣಾವತ್ ಮುಂಬೈನ ಬಾಂದ್ರಾ ಪೊಲೀಸರ ಎದುರು ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬಾಂಬೆ ಹೈಕೋರ್ಟ್ ಜನವರಿ 25ರವರೆಗೂ ಕಂಗನಾ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆ ನಡೆಸದಂತೆ ಸೂಚಿಸಿದೆ.