alex Certify BIG NEWS: ಭಾರತದಲ್ಲಿ ಸತತ 4ನೇ ದಿನವೂ 3ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 2,767 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತದಲ್ಲಿ ಸತತ 4ನೇ ದಿನವೂ 3ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 2,767 ಜನ ಬಲಿ

ನವದೆಹಲಿ: ಭಾರತದಲ್ಲಿ ಸತತ ನಾಲ್ಕನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,49,691 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2,767 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,92,311 ಕ್ಕೆ ಏರಿಕೆಯಾಗಿದೆ.

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕ್: ಸೋಂಕಿನ ಲಕ್ಷಣವಿದ್ರೂ ನೆಗೆಟಿವ್ ಬಂದವರಿಗೆ ಡೆಂಗೆ, ಮಲೇರಿಯಾ ಆತಂಕ

ಇನ್ನು ದೇಶದಲ್ಲಿ 26,82,751 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,40,85,110 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,17,113 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 14,09,16,417 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...