ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಮಿನಿ ಬಸ್ ಹಾಗೂ ಕ್ಯಾಂಟರ್ ನಡುವೆ ಈ ಅಪಘಾತ ಸಂಭವಿಸಿದ್ದು, ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್-ಆಗ್ರಾ ಹೆದ್ದಾರಿ ಬಳಿ ನಡೆದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸೆಗಾಗಿ 50 ಸಾವಿರ ರೂ ನೀಡುವುದಾಗಿ ತಿಳಿಸಿದ್ದಾರೆ.