alex Certify BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ – ಒಂದೇ ದಿನದಲ್ಲಿ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ – ಒಂದೇ ದಿನದಲ್ಲಿ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,855 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,20,048ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 163 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,010ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,71,686 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,03,94,352 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 20,746 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 29,28,053 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,42,306 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,50,81,079 ಜನರಿಗೆ ಕೊರೊನಾ ಮಾದರಿ ಪರೀಕ್ಷೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...